ಕತ್ತಲಾಗುವ ಹೊತ್ತು
ನೆರಳುಗಳಿಗೆಲ್ಲ ಅಸ್ತಿತ್ವ ಕಳೆದುಕೊಳ್ಳುವ ಭಯ
ಬೆಳಗಿಡೀ ಸುರಿದ ಮಳೆಯ ಕಟ್ಟಕಡೆಯ ಹನಿ
ಒಳಮನೆಯಲ್ಲಿ ಉಕ್ಕುತ್ತಿರುವ ಹಾಲು
ಬಂಧಿಯಾಗಿದ್ದ ಪೆನ್ನು ಪುಸ್ತಕಗಳಿಗೆಲ್ಲ
ಪಾಟೀಚೀಲದಿಂದ ಮುಕ್ತಿ
ಅಂಗಿಯ ಮೇಲೆಲ್ಲಾ ಶಾಯಿಯ ಗುರುತು
ಅಳಿಸಿದಷ್ಟೂ ಉಳಿಯುವ ಕಲೆ
ಮಡಚಿ ಒಳಗಿಟ್ಟ ಕೊಡೆಯಲ್ಲಿ
ಒದ್ದೆ ಒದ್ದೆ ನೆನಪುಗಳು….
ಹೊಸ್ತಿಲಾಚೆಗಿಂದ ಕೇಳುವ ಬಿಕ್ಕು
ದೇವರ ನಾಮದಲ್ಲೀಗ ಭಕ್ತಿ ಲಯ
ಮಾಡಿಗಂಟಿ ಕುಳಿತ ಗುಬ್ಬಚ್ಚಿಯದು
ಕಾತರದ ನೋಟ
ಕತ್ತಲಾಗುವ ಹೊತ್ತು
ದಾರಿಗಳದ್ದೇನೋ ಗೊಣಗಾಟ
ಚೆಲ್ಲಿದ ಮೈ ತಂಪಾಗಿ ಅನಾಥಭಾವ ..
ಕಡುಗತ್ತಲಾದ ಮೇಲೆ ಜಗವೆಲ್ಲ ಹಳದಿ
“ಚೆಲ್ಲಿದ ಮೈ ತಂಪಾಗಿ ಅನಾಥಭಾವ ..
ಕಡುಗತ್ತಲಾದ ಮೇಲೆ ಜಗವೆಲ್ಲ ಹಳದಿ”
good one…
good one.. i can feel it !
yeah.. me to said d same!!!
ಕತ್ತಲಾಗುವ ಹೊತ್ತು
“ನೆರಳುಗಳಿಗೆಲ್ಲ ಅಸ್ತಿತ್ವ ಕಳೆದುಕೊಳ್ಳುವ ಭಯ”…..
Excellent expression of thoughts…nice illustration and example. Really enjoyed reading this.
ಕವನ ಚೆನ್ನಾಗಿದೆ, ಪ್ರತಿ ಸಾಲು ಮತ್ತೆ ಮತ್ತೆ ಓದುವಂತಿದೆ.
Chenda ide 🙂
Thank u
ಕವನ ಮತ್ತೆ ಮತ್ತೆ ಓದಬೇಕೆನಿಸುತ್ತದೆ. ಚಿತ್ರಗಳನ್ನು ಕಟ್ಟಿಕೊಡುತ್ತದೆ.
ಮಡಚಿ ಒಳಗಿಟ್ಟ ಕೊಡೆಯಲ್ಲಿ
ಒದ್ದೆ ಒದ್ದೆ ನೆನಪುಗಳು….ವಾವ್… ಒಳ್ಳೆಯ ಕವನ
ಸಾಯಂಕಾಲದ ಚಿತ್ರಣ ಚೆನ್ನಾಗಿದೆ.
🙂