ಕೋಯೀ ಮೌಸಮ್ ಐಸಾ ಆಯೇ
ಉನಕೋ ಅಪನೇ ಸಾಥ್ ಜೋ ಲಾಯೇ…
ಅದೆಷ್ಟೋ ದಿನಗಳೇ ಕಳೆದುಹೊದವಲ್ಲ ನನ್ನ ಬಾಲ್ಕನಿಯಲ್ಲಿ ರಾಗಗಳು ಕೇಳದೇ.. ಒಂದು ಹಿತವಾದ ಮುಸ್ಸಂಜೆ, ಅದಕ್ಕೂ ಚೆನ್ನಾದ ಕೆನೆ ಕಾಫಿ, ತೀರದ ಕನಸುಗಳೊಂದಿಗೆ ಕಳೆದುಹೊಗಲೂ ಮನಸು ಹದಗೊಳ್ಳಬೇಕು. ಏನನ್ನೋ ಓದುತ್ತ ಯಾರ್ಯಾರದೋ ಕನಸುಗಳನ್ನು ,ಯೋಚನೆಗಳನ್ನು ನಮ್ಮ ಕಣ್ಣೊಳಗೆ ತುಂಬಿಕೊಳ್ಳುತ್ತಾ ಮರೆಯಾಗುವುದಕ್ಕಿಂತ ಬಾಲ್ಕನಿಯೊಳಗೆ ನಾನು ನಾನಾಗುವುದೇ ವಾಸಿ ಅಲ್ಲವೇ?
ಉಸ್ ಮೋಡ್ ಸೆ ಶುರೂ ಕರೇ ಫಿರ್ ಯೇ ಜಿಂದಗಿ…..
ಹರ್ ಶೆಜಹಾ ಹಸೀನ್ ಥೀ ಹಮ್ ತುಮ್ ಥೇ ಅಜನಬೀ…
ಹೀಗೆಲ್ಲ ಯೋಚಿಸುವುದು ತಪ್ಪಾದೀತು. ಕಳೆದು ಹೋದ ಕಾಲಕ್ಕೆ ತಿರುಗಿ ಹೋಗಿಬಿಟ್ಟರೆ ನನ್ನ ನನಸಾದ ಕನಸುಗಳ ಕಥೆ ಏನಾಗಬೇಡ? ದಿನಗಳಿದ್ದವು……. ಜಡಿಮಳೆಗೆ ಕೈಯೊಡ್ಡಿ ಕನಸು ಕಾಣುತ್ತ ಅಲ್ಲೇ ನಿಂತು ಬಿಡುವ ಕ್ಷಣಗಳು. ಓದುತ್ತ ಓದುತ್ತ ಇತಿಹಾಸ, ಗಣಿತ..ವಿಜ್ನಾನಗಳೆಲ್ಲ ಕಲಸು ಮೇಲೋಗರವಾಗಿ ಕುಳಿತಲ್ಲೇ ನಿದ್ದೆ ಹೋಗುವ.. ನಡೆದಷ್ಟೂ ದೂರವಾಗುವ ರಸ್ತೆಯಲ್ಲಿ ಅಪರೂಪಕ್ಕೆ ಇಷ್ಟವಾಗುವ ಏಕಾಂಗಿತನದ… ಕಾಣದ ಗೆಳೆಯನ ಕಲ್ಪನೆಯ ಸುಖದ ಅದೆಷ್ಟೋ ಘಳಿಗೆಗಳು..
ಬೀತೇ ಲಮ್ಹೆ ಕುಚ್ ಐಸೆ ಹೈ
ಖುಷ್ಬೂ ಜೈಸೆ ಹಾತ್ ನ ಆಯೇ….
ಹಾಲ್ ಜೋ ದಿಲ್ ಕಾ ಜುಗನೂ ಜೈಸಾ
ಜಲತಾ ಜಾಯೆ.. ಭುಜತಾ ಜಾಯೆ….
ನೆನಪುಗಳ ಜೋಳಿಗೆಗೆ ಕೈ ಹಾಕಿದರೆ ಲೆಕ್ಕವಿಲ್ಲದಷ್ಟು ಬಿಂಬಗಳು. ನೋಡ ನೋಡುತ್ತಲೇ ಬಾಲ್ಕನಿಯಲ್ಲಿ ಕತ್ತಲಾವರಿಸುತ್ತದೆ. ಎಳನೀರು ಗಾಡಿಯವನು ಸವೆದು ಬಣ್ಣ ಕಳೆದುಕೊಂಡ ನಸುನೀಲಿ ತಾಡಪಾಲು ಗಾಡಿಗೆ ಮುಚ್ಚಿ ಮನೆಗೆ ಹೊರಡಲು ರೆಡಿಯಾಗುತ್ತಾನೆ.. ಪುಟ್ಟ ಪಾಪುವಿಗೆ ಅಮ್ಮ ಉಣಿಸುವ ಹಾಲು ಅನ್ನ ಬೇಸರವಾಗಿದೆ. ಆಗಸದ ಚಂದ್ರನೂ ಹಳತಾಗಿದ್ದಾನೆ. ಮೀನು ಮಾರುವವವನ ಅಂಗಡಿಯೆದುರು ಇಳಿಸಿಹೋದ ದೊಡ್ಡ ದೊಡ್ಡ ಮಂಜುಗಡ್ಡೆಗಳು ಕರಗಲು ಶುರುವಾಗಿವೆ… ಕತ್ತಲೆಂದರೆ ಯಾರಿಗೋ ಮುಗಿದ ದಿನ. ಮತ್ತಾರದೋ ಕನಸು ಕಾಣುವ ಕಣ್ಣುಗಳಿಗೆ ಮುಗಿಯದ ಇರುಳು….
ಈ ಸಂಜೆ ಯಾಕಾಗಿದೆ ನೀನಿಲ್ಲದೆ
ಈ ಸಂತೆ ಸಾಕಾಗಿದೆ…. ನೀನಿಲ್ಲದೆ……
ಗಝಲ್ ಗಳೂ ಬೇಸರವಾದಾಗ ಸೋನು ನಿಗಮ್ ಮನ ತುಂಬುತ್ತಾನೆ… ಅದು ಯಾವತ್ತಿಗೂ ಬೇಸರವಾಗದ ಭಾವ! 🙂
ಬೇಸರಕ್ಕೂ ಸೈ.. ಕನವರಿಕೆಗಳಿಗೂ ಸರಿ , ಪ್ರೀತಿಗೂ ಸರಿ.. ಕಡಲ ತೀರದ ಅಲೆಗಳಿಗೆ ಕಾಲು ಚಾಚಿ ಕುಳಿತ ಹೊತ್ತಿನಿಂದ ಹಿಡಿದು ಬೇಸರದ ಸಂಜೆಗಳಲ್ಲಿ ಮೌನಕ್ಕೆ ಶರಣಾದ ಕ್ಷಣಗಳವರೆಗೆ…
ಧುನಿಯಾ ಕಿ ರಸ್ಮೋ ಕೋ ಚಾಹತ್ ಮೇ ಶಾಮಿಲ್ ನ ಕರನಾ..
ಮಂಜಿಲ್ ಹಮ್ ಅಪನೀ ಪಾ ಕೆ ರಹೇಂಗೇ ನಾ ತುಮ್ ಕಿಸೀಸೇ ನ ಢರನಾ
ಪಾಗಲ್ ರಸ್ಮೆ ಪಾಗಲ್ ಧುನಿಯಾ
ಔರ ಥೋಡೇ ಹಮ್ ತುಮ್ ಪಾಗಲ್ ….
ನಾನು, ನನ್ನ ಬಾಲ್ಕನಿ ಇಬ್ಬರು ಮತ್ತೆ ನೆನಪುಗಳಿಗೆ ಮರಳುತ್ತಿದ್ದೇವೆ… ಹೊಸ ಹೊಸ ಕನಸುಗಳೊಂದಿಗೆ…..
Nice…. Matashtu barli hudugi!!
ಮೀನು ಮಾರುವವವನ ಅಂಗಡಿಯೆದುರು … ಅಂತಿದ್ಯಲ್ಲ? ಅಲ್ಲಿಂದ ಯಾಕೋ ಸುಮ್ಮನೆ ಇಷ್ಟು ಬರೀಬೇಕು ಅನ್ಸ್ತು. ಸುಮ್ನೆ ತಮಾಷೆಗೆ… >>> ಮೀನು ಮಾರುವವವನ ಅಂಗಡಿಯೆದುರು ಇಳಿಸಿಹೋದ ದೊಡ್ಡ ದೊಡ್ಡ ಮಂಜುಗಡ್ಡೆಗಳು ಕರಗಲು ಶುರುವಾಗಿವೆ. ಬುಟ್ಟಿಯೊಳಗಿನ ಮೀನೂ ಸಹ… ಕಾಲು ಸುತ್ತುವ ಬೆಕ್ಕು ಕಾಲಿ ಬುಟ್ಟಿ ನೋಡಿ ಸುಮ್ಮನೆ ಬಿದ್ದುಕೊಂಡಿದೆ. ಮಣ್ಣ ಬಣ್ಣದ ನಾಯಿ ಮೂಗರಳಿಸಿದ್ದು ಸಂಜೆಗಪ್ಪಿನಲ್ಲೂ ಸರಿಯಾಗಿ ಕಾಣಿಸುತ್ತಿದೆ. ಬಯ್ಯೇ ಬಾಯಿಂದ ಪಿಚಕ್ಕನೆ ಹಾರಿದ ಕವಳ ಆಗಷ್ಟೇ ಮೂತಿ ಹೊರಹಾಕಿದ ಇಲಿಯ ಪಕ್ಕಕ್ಕೆ ಬಿದ್ದಿದೆ. ಆಕೆ ಚಿಲ್ಲರೆ ನೋಟುಗಳ ಚೀಲ ಸೊಂಟಕ್ಕೆ ಸಿಕ್ಕಿಸಿ ಬುಟ್ಟಿ ತಲೆಗೇರಿಸುವ ಹೊತ್ತಿಗೆ ಸರಿಯಾಗಿ ಅವ ಬರುತ್ತಿದ್ದಾನೆ. ಒದ್ದೆ ಒದ್ದೆ ಬಟ್ಟೆ ತಲೆಗೊಂದು ಮುಂಡಾಸು ಸುತ್ತಿಕೊಂಡು. ಬಲಗೈಯ ಅಂಗವಸ್ತ್ರದಲ್ಲಿ ಜೀವ! ಆಗಷ್ಟೆ ಹಿಡಿದ, ಇನ್ನೂ ಉಸಿರಾಡುತ್ತಿರುವ, ಬಂಗಾರದ ಬಣ್ಣದ ಮೀನಿಗೆ ಹೆಚ್ಚು ದುಡ್ಡು ಕೊಡುವವರನ್ನು ಹುಡುಕುತ್ತಿದ್ದಾನೆ. ಸತ್ತ ಮೂರು ಮೆನಿಗೆ ಮೂವತ್ತು ರೂಪಾಯಿಯಾದರೆ, ಇವನ ಜೀವಂತ ಮೀನಿಗೆ ನೂರಕ್ಕೂ ಕಡಿಮೆಯಿಲ್ಲ. ಉಸಿರಾಟ ನಿಲ್ಲುವುದರೊಳಗೆ ಮಾರಬೇಕು ಆಟ… ಕತ್ತಲೆಂದರೆ ಯಾರಿಗೋ ಮುಗಿದ ದಿನ. ಇನ್ಯಾರಿಗೋ ಆಗಷ್ಟೆ ಆರಂಭ….
🙂 🙂 🙂 ಜಲ್ದಿ!
ನಿಮ್ಮ ಬ್ಲಾಗ್ ಗಳ ಎಲ್ಲ ಬರಹ ಖುಷಿ ಕೊಟ್ಟಿತು.
ಇನ್ನು ಒಂದು ತಿಂಗಳ ನಂತರ ಮತ್ತೆ ಬಾಲ್ಕನಿಗೆ ಮರಳಿದ್ದೇನೆ, ನಾನು – ನನ್ನ ಬಾಲ್ಕನಿ, ಬಾಲ್ಕನಿ- ಕಾಫಿ, ಸಂಜೆ, ನೆನಪು, ಹೀಗೆ ಒಂದು ಪೋಸ್ಟ್ ಹಾಕಿ ಮತ್ತೆ ಒಂದು ತಿಂಗಳು ಕಾಣೆಯಾಗೋದು !
🙂 🙂 🙂
ಚೆನ್ನಾಗಿದೆ… [:)] [:D]
ನೆನಪುಗಳ ಜೋಳಿಗೆಗೆ ಕೈ ಹಾಕಿದರೆ ಲೆಕ್ಕವಿಲ್ಲದಷ್ಟು ಬಿಂಬಗಳು. ನೋಡ ನೋಡುತ್ತಲೇ ಬಾಲ್ಕನಿಯಲ್ಲಿ ಕತ್ತಲಾವರಿಸುತ್ತದೆ. ಎಳನೀರು ಗಾಡಿಯವನು ಸವೆದು ಬಣ್ಣ ಕಳೆದುಕೊಂಡ ನಸುನೀಲಿ ತಾಡಪಾಲು ಗಾಡಿಗೆ ಮುಚ್ಚಿ ಮನೆಗೆ ಹೊರಡಲು ರೆಡಿಯಾಗುತ್ತಾನೆ.. ಪುಟ್ಟ ಪಾಪುವಿಗೆ ಅಮ್ಮ ಉಣಿಸುವ ಹಾಲು ಅನ್ನ ಬೇಸರವಾಗಿದೆ. ಆಗಸದ ಚಂದ್ರನೂ ಹಳತಾಗಿದ್ದಾನೆ. ಮೀನು ಮಾರುವವವನ ಅಂಗಡಿಯೆದುರು ಇಳಿಸಿಹೋದ ದೊಡ್ಡ ದೊಡ್ಡ ಮಂಜುಗಡ್ಡೆಗಳು ಕರಗಲು ಶುರುವಾಗಿವೆ… ಕತ್ತಲೆಂದರೆ ಯಾರಿಗೋ ಮುಗಿದ ದಿನ. ಮತ್ತಾರದೋ ಕನಸು ಕಾಣುವ ಕಣ್ಣುಗಳಿಗೆ ಮುಗಿಯದ ಇರುಳು…..
nice lines…